COSTALNEWS | BIG BREAKING ನಾಯಕವಾಡಿ ಗುರುವಾರದ ಸಂತೆಯಲ್ಲಿ ವ್ಯಾಪಾರಸ್ಥರು ಗ್ರಾಹಕರಿಗೆ ದುಪ್ಪಟ್ಟು ಬೆಲೆಯ ಬರೆ..!!
Thursday, July 9, 2026
ಕುಂದಾಪುರ ತಾಲೂಕಿನ ನಾಯಕವಾಡಿ ಗುರುವಾರದ ಸಂತೆಯಲ್ಲಿ ವ್ಯಾಪಾರಸ್ಥರು ಗ್ರಾಹಕರಿಂದ ದುಪ್ಪಟ್ಟು ಬೆಲೆ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಸ್ಥಳೀಯರ ಆರೋಪದ ಪ್ರಕಾರ, ತರಕಾರಿ, ಹಣ್ಣು-ಹಂಪಲು, ಮೆಣಸು ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳಲ್ಲಿ ಏಕಾಏಕಿ ಭಾರೀ ಏರಿಕೆ ಕಂಡುಬಂದಿದ್ದು, ಸಾಮಾನ್ಯ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರದ ಸಂತೆಗೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಖರೀದಿಗೆ ಆಗಮಿಸುತ್ತಾರೆ. ಆದರೆ ಬೆಲೆ ಏರಿಕೆಯಿಂದ ಮಧ್ಯಮ ಹಾಗೂ ಬಡ ವರ್ಗದ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸುವುದೇ ಕಷ್ಟವಾಗುತ್ತಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳು ಸಂತೆಗೆ ಭೇಟಿ ನೀಡಿ, ಬೆಲೆಪಟ್ಟಿಯನ್ನು ಪರಿಶೀಲಿಸಿ, ನಿಯಮಾನುಸಾರ ವ್ಯಾಪಾರ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಹಕರಿಗೆ ನ್ಯಾಯಸಮ್ಮತ ದರದಲ್ಲಿ ಅಗತ್ಯ ವಸ್ತುಗಳು ದೊರೆಯುವಂತೆ ವ್ಯಾಪಾರಸ್ಥರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಹಾಗೂ ಅಗತ್ಯವಿದ್ದಲ್ಲಿ ಬೆಲೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂಬುದು ಸಾರ್ವಜನಿಕರ ಮನವಿಯಾಗಿದೆ.
ಗುರುವಾರ ಸಂತೆಗೆ ಮಾಧ್ಯಮದವರು ಭೇಟಿ ನೀಡಿದ ಸಂದರ್ಭ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಗುರುವಾರ ಸಂತೆ ನಾಯಕವಾಡಿ ಯಲ್ಲಿ ನಡೆಯುವ ಮಾರುಕಟ್ಟೆಯ ಬೆಲೆಯ ದುಪ್ಪಟ್ಟು ಏರಿಕೆ ಬಗ್ಗೆ ಆರೋಪ ಕೇಳಿ ಬಂದಿದೆ.
ಆರೋಪಕ್ಕೆ ಸಂಬಂಧಿಸಿದಂತೆ ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ರವರಿಗೆ ಕೇಳಿದಾಗ ಮುಂದಿನ ವಾರದ ನಾಯಕವಾಡಿ ಗುರುವಾರದ ಸಂತೆಯಲ್ಲಿ ವ್ಯಾಪಾರಿಗಳನ್ನು ಕರೆದು ಮಾತನಾಡಿಸಿ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ಹೇಳುತ್ತೇನೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ