ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS    | BIG BREAKINGತುಮಕೂರು: ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿ ಪಡೆ – ಆರು ಆರೋಪಿಗಳ ಬಂಧನ

COSTALNEWS | BIG BREAKINGತುಮಕೂರು: ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿ ಪಡೆ – ಆರು ಆರೋಪಿಗಳ ಬಂಧನ

ತುಮಕೂರು: ರಾಜ್ಯವ್ಯಾಪಿ ಖೋಟಾ ನೋಟು ಜಾಲವನ್ನು ಭೇದಿಸುವಲ್ಲಿ ತುಮಕೂರು ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಕೇವಲ ಒಂದೇ ₹500 ಮುಖಬೆಲೆಯ ನಕಲಿ ನೋಟಿನ ಸುಳಿವನ್ನು ಆಧರಿಸಿ ಆರಂಭಿಸಿದ ತನಿಖೆ, ರಾಜ್ಯದ ವಿವಿಧ ಜಿಲ್ಲೆಗಳವರೆಗೆ ವಿಸ್ತರಿಸಿ ಭರ್ಜರಿ ಕಾರ್ಯಾಚರಣೆಗೆ ಕಾರಣವಾಗಿದೆ.
ಈ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ಪೊಲೀಸರು ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ನಕಲಿ ₹500 ಮುಖಬೆಲೆಯ ನೋಟುಗಳು, ಮುದ್ರಣಕ್ಕೆ ಬಳಸಲಾಗುತ್ತಿದ್ದ ಉಪಕರಣಗಳು ಹಾಗೂ ಇತರೆ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ನಕಲಿ ನೋಟುಗಳನ್ನು ಚಲಾವಣೆಗೆ ತರುವ ಜಾಲವನ್ನು ರೂಪಿಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳ ಪತ್ತೆ ಹಾಗೂ ಜಾಲದ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಖೋಟಾ ನೋಟುಗಳು ಕಂಡುಬಂದರೆ ಸಾರ್ವಜನಿಕರು ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article