ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS ಕುಂದಾಪುರ ಪುರಸಭೆ ವ್ಯಾಪ್ತಿಯ ರಿಂಗ್ ರೋಡ್‌ನಲ್ಲಿ ಖಾಲಿ ಸರಾಯಿ ಬಾಟಲಿಗಳ ಹಾವಳಿ ಕುರಿತು COSTALNEWS ವರದಿ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪುರಸಭೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸ್ವಚ್ಛತಾ ಕಾರ್ಯ

COSTALNEWS ಕುಂದಾಪುರ ಪುರಸಭೆ ವ್ಯಾಪ್ತಿಯ ರಿಂಗ್ ರೋಡ್‌ನಲ್ಲಿ ಖಾಲಿ ಸರಾಯಿ ಬಾಟಲಿಗಳ ಹಾವಳಿ ಕುರಿತು COSTALNEWS ವರದಿ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪುರಸಭೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸ್ವಚ್ಛತಾ ಕಾರ್ಯ

ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿಯ ರಿಂಗ್ ರೋಡ್‌ನಲ್ಲಿ ರಾತ್ರಿ ವೇಳೆ ಮದ್ಯಪಾನ ಮಾಡಿ ಖಾಲಿ ಸರಾಯಿ ಬಾಟಲಿಗಳನ್ನು ರಸ್ತೆ ಬದಿಯಲ್ಲಿ ಹಾಗೂ ಇಂಟರ್‌ಲಾಕ್ ಅಳವಡಿಸಿದ ಸ್ಥಳಗಳಲ್ಲಿ ಎಸೆದು ಹೋಗುತ್ತಿರುವ ಘಟನೆಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದವು.
ಸಾರ್ವಜನಿಕರ ಸಂಚಾರಕ್ಕೆ ನಿರ್ಮಿಸಲಾಗಿರುವ ಈ ರಸ್ತೆಯ ದುರ್ಬಳಕೆಯ ಬಗ್ಗೆ COSTALNEWS ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸಿಬ್ಬಂದಿಗಳ ಮೂಲಕ ಸ್ಥಳದಲ್ಲಿ ಬಿದ್ದಿದ್ದ ಸರಾಯಿ ಬಾಟಲಿಗಳು ಹಾಗೂ ಕಸವನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.
ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ಮಾಧ್ಯಮದೊಂದಿಗೆ ಮಾತನಾಡಿ, 
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ಈ ವಿಷಯವನ್ನು ಕುಂದಾಪುರ ಪೊಲೀಸ್ ಇಲಾಖೆಯ ಗಮನಕ್ಕೂ ತರಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
ರಿಂಗ್ ರೋಡ್‌ನಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಮದ್ಯಪಾನ ಮಾಡಿ ಕಸ ಎಸೆಯುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ. ಸಮಸ್ಯೆಗಳನ್ನು ಬೆಳಕಿಗೆ ತಂದು ಸಂಬಂಧಪಟ್ಟ ಇಲಾಖೆಯ ಗಮನ ಸೆಳೆಯುವ ಕೆಲಸವನ್ನು COSTALNEWS ಮುಂದುವರಿಸುತ್ತಿದ್ದು, ಇದು ಮತ್ತೊಮ್ಮೆ COSTALNEWS BIG IMPACTಗೆ ಸಾಕ್ಷಿಯಾಗಿದೆ.
ಜಾಲ ನಿಮ್ಮದು… ಧ್ವನಿ ನಿಮ್ಮದು… COSTALNEWS.

Ads on article

Advertise in articles 1

advertising articles 2

Advertise under the article