COSTALNEWS | ವಿಶೇಷ ವರದಿ ಧಾರ್ಮಿಕ ಕ್ಷೇತ್ರದ ನಗುಮುಖದ "ತಾರೆ" – ಕೊಲ್ಲೂರು ದೇವಸ್ಥಾನದ ಟ್ರಸ್ಟಿ ಸುಧಾ ಸುರೇಶ್ ಮೊಗವೀರ
Thursday, July 16, 2026
ಕೊಲ್ಲೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಐತಿಹಾಸಿಕ ಹಾಗೂ ಪ್ರಸಿದ್ಧ ಕಾರ್ಣಿಕ ಕ್ಷೇತ್ರವಾದ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆ ಸುಧಾ ಸುರೇಶ್ ಮೊಗವೀರ ಅವರು ತಮ್ಮ ಸರಳತೆ, ಸೌಜನ್ಯ ಮತ್ತು ಭಕ್ತರೊಂದಿಗೆ ಆತ್ಮೀಯವಾಗಿ ನಡೆದುಕೊಳ್ಳುವ ಗುಣದಿಂದ ಗಮನ ಸೆಳೆದಿದ್ದಾರೆ.
ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಪೂಜೆ, ಸೇವೆ ಹಾಗೂ ಇತರೆ ದೇವಸ್ಥಾನದ ವ್ಯವಸ್ಥೆಗಳ ಕುರಿತು ಮಾಹಿತಿ ಕೇಳಿದಾಗ, ಸಾಧ್ಯವಾದ ಮಟ್ಟಿಗೆ ತಕ್ಷಣ ಸ್ಪಂದಿಸಿ ಅವರಿಗೆ ಅನುಕೂಲವಾಗುವಂತೆ ಸಹಕರಿಸುವ ಮೂಲಕ ಅವರು ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹಲವು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆಯಾಗಿ ಸೇವೆ ಸಲ್ಲಿಸುತ್ತಿರುವ ಸುಧಾ ಸುರೇಶ್ ಮೊಗವೀರ ಅವರು ಜನಸಾಮಾನ್ಯರ ಸಂಕಷ್ಟಗಳನ್ನು ಅರ್ಥಮಾಡಿಕೊಂಡು ಸರಳ ಹಾಗೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.