ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS | ಧಾರ್ಮಿಕ ಸುದ್ದಿ . ಬೈಂದೂರು: ಬಿಳಿಶಿಲೆ ಗಣಪತಿ ದೇವಸ್ಥಾನದಲ್ಲಿ ಚಾತುರ್ಮಾಸ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ

COSTALNEWS | ಧಾರ್ಮಿಕ ಸುದ್ದಿ . ಬೈಂದೂರು: ಬಿಳಿಶಿಲೆ ಗಣಪತಿ ದೇವಸ್ಥಾನದಲ್ಲಿ ಚಾತುರ್ಮಾಸ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ

ಬೈಂದೂರು: ತಾಲೂಕಿನ ಗೋಳಿಹೊಳೆ ಬಿಳಿಶಿಲೆ ಗಣಪತಿ ದೇವಸ್ಥಾನದಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಚಾತುರ್ಮಾಸ ಕಾರ್ಯಕ್ರಮಕ್ಕೆ ಭಕ್ತಿಭಾವದಿಂದ ಅದ್ದೂರಿ ಚಾಲನೆ ದೊರೆಯಿತು.
ಕಾರ್ಯಕ್ರಮದ ಮೊದಲ ದಿನ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು, ವೇದಮಂತ್ರಗಳ ಘೋಷ ಹಾಗೂ ವಿಶೇಷ ಆರಾಧನೆಗಳು ನೆರವೇರಿದವು. ಒಟ್ಟು 48 ದಿನಗಳ ಕಾಲ ನಡೆಯಲಿರುವ ಚಾತುರ್ಮಾಸ ಕಾರ್ಯಕ್ರಮದ ಆರಂಭವು ಭಕ್ತರ ಸಂಭ್ರಮದ ನಡುವೆ ನಡೆಯಿತು.
ಬೈಂದೂರು ಕ್ಷೇತ್ರದ ಜನತೆ ಪಕ್ಷ ಬೇಧ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ವಹಿಸಿದ್ದು, ಗೌರವಾಧ್ಯಕ್ಷರಾಗಿ ಕಾಂಗ್ರೆಸ್ ಮಾಜಿ  ಶಾಸಕ ಗೋಪಾಲ್ ಪೂಜಾರಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಶಾಸಕ ಮಂಕಾಳ್ ವೈದ್ಯ, ಕರಾವಳಿ ಭಾಗದ ಎಲ್ಲಾ ಕ್ಷೇತ್ರದ ಶಾಸಕರು, ವಿವಿಧ ಪಕ್ಷಗಳ ನಾಯಕರು, ಧಾರ್ಮಿಕ ಮುಖಂಡರು  ಸೇರಿದಂತೆ  ಉದ್ಯಮಿ ಡಾ ಗೋವಿಂದ ಬಾಬು ಪೂಜಾರಿ ಹಾಗೂ ಸಾವಿರಾರು ಭಕ್ತರು ಭಾಗವಹಿಸಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಕ್ಷೇತ್ರದ ಒಳಿತಿಗಾಗಿ ಕಾಂಗ್ರೆಸ್ ಬಿಜೆಪಿ ಪಕ್ಷದ ನಾಯಕರು ಸೇರಿದಂತೆ ಜನಪ್ರತಿನಿಧಿಗಳು ಚಾತುರ್ಮಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು 

ಚಾತುರ್ಮಾಸ ಕಾರ್ಯಕ್ರಮವು ಮುಂದಿನ 48 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ 
ಎಂದು ಸಂಘಟಕರು ಮಾಧ್ಯಮಕ್ಕೆ ತಿಳಿಸಿದ್ದಾರೆ

Ads on article

Advertise in articles 1

advertising articles 2

Advertise under the article