ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

kundapura : COSTALNEWS | BIG BREAKING ನೆಂಪು ಅಂಗನವಾಡಿ ಕೇಂದ್ರದ ಒಳಗಡೆ  ಸಹಾಯಕ ಶಿಕ್ಷಕಿ  ನೇಣಿಗೆ ಶರಣು..!

kundapura : COSTALNEWS | BIG BREAKING ನೆಂಪು ಅಂಗನವಾಡಿ ಕೇಂದ್ರದ ಒಳಗಡೆ ಸಹಾಯಕ ಶಿಕ್ಷಕಿ ನೇಣಿಗೆ ಶರಣು..!

ನಮಸ್ಕಾರ, ನೀವು ನೋಡುತ್ತಿರುವುದು COSTALNEWS.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಗ್ರಾಮದ ನೆಂಪುವಿನ ಅಂಗನವಾಡಿ ಕೇಂದ್ರದಲ್ಲಿ ದುರ್ಘಟನೆಯೊಂದು ನಡೆದಿರುವ ಮಾಹಿತಿ ಲಭ್ಯವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಶಿಕ್ಷಕಿ (ಸಹಾಯಕಿ) ಅವರು ಚೂಡಿದಾರದ ವೇಲ್ ಬಳಸಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆ ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಕಂಡ್ಲೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದು, ಸ್ಥಳ ಮಹಜರು ಸೇರಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಅಧಿಕೃತ ಮಾಹಿತಿ ಹಾಗೂ ತನಿಖೆಯ ವರದಿ ಇನ್ನಷ್ಟೇ ನಿರೀಕ್ಷಿಸಲಾಗಿದೆ.

Ads on article

Advertise in articles 1

advertising articles 2

Advertise under the article