ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

udupi - kundapura: ಕುಂಭಾಸಿ ಗ್ರಾಮ ಪಂಚಾಯತ್ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡ ಸರಿಪಡಿಸುವಂತೆ ಆಗ್ರಹ

udupi - kundapura: ಕುಂಭಾಸಿ ಗ್ರಾಮ ಪಂಚಾಯತ್ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡ ಸರಿಪಡಿಸುವಂತೆ ಆಗ್ರಹ

ಕುಂದಾಪುರ: ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣ್ ಹತ್ವಾರ್ ಬೆಟ್ಟಿನ ವಾರ್ಡ್ ನಂ. 1ರಲ್ಲಿ ಹರೀಶ್ ಅವರ ಮನೆ ಮುಂಭಾಗದ ರಸ್ತೆಯಲ್ಲಿ ಆಳವಾದ ಹೊಂಡಗಳು ಬಿದ್ದಿದ್ದು, ಮಳೆಗಾಲದಲ್ಲಿ ನೀರು ನಿಂತು ಸಂಚಾರ ದುಸ್ತರವಾಗಿದೆ.
ಈ ಬಗ್ಗೆ ಸಾರ್ವಜನಿಕರ ಪರವಾಗಿ ಕುಂಭಾಸಿ ಗ್ರಾಮ ಪಂಚಾಯತ್‌ಗೆ ಹಲವು ಬಾರಿ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಂಟಿಗಳು ಬೆಳೆದಿರುವುದರಿಂದ ಶಾಲಾ ಮಕ್ಕಳು, ವೃದ್ಧರು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದೇ ವಿಚಾರವಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಗಾಣಿಗ ರವರ  ಗಮನಕ್ಕೆ ಸಮಸ್ಯೆಯನ್ನು ತಂದಾಗ, "ನಮಗೆ ಅಧಿಕಾರ ಇಲ್ಲ, ಈ ವಿಷಯ ನಮಗೆ ಸಂಬಂಧಪಟ್ಟದ್ದಲ್ಲ" ಎಂದು ಉದ್ದಟವಾಗಿ ಪ್ರತಿಕ್ರಿಯೆ ನೀಡಿದ್ದು, ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಹರೀಶ್ ಆರೋಪಿಸಿದ್ದಾರೆ.
"ನಾನು ವೈಯಕ್ತಿಕ ಲಾಭಕ್ಕಾಗಿ ಏನನ್ನೂ ಕೇಳಿಲ್ಲ. ಸಾರ್ವಜನಿಕ ರಸ್ತೆ ಸರಿಪಡಿಸಿ ಜನರು ಸುರಕ್ಷಿತವಾಗಿ ಓಡಾಡುವ ವ್ಯವಸ್ಥೆ ಮಾಡಿಕೊಡಿ ಎಂದು ಮಾತ್ರ ಮನವಿ ಮಾಡಿದ್ದೇನೆ. ಅಧಿಕಾರ ಇಲ್ಲದಿದ್ದರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕಿತ್ತು" ಎಂದು ಅವರು ಹೇಳಿದ್ದಾರೆ.
ಮಳೆಗಾಲದಲ್ಲಿ ಈ ರಸ್ತೆ ಹೊಂಡಗಳಿಂದ ಅಪಘಾತ ಸಂಭವಿಸಿದರೆ ಅದರ ಸಂಪೂರ್ಣ ಹೊಣೆಗಾರಿಕೆಯನ್ನು ಕುಂಭಾಸಿ ಗ್ರಾಮ ಪಂಚಾಯತ್ ಅಧಿಕಾರಿಗಳೇ ಹೊತ್ತುಕೊಳ್ಳಬೇಕಾಗುತ್ತದೆ ಎಂದು ಹರೀಶ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಸುರಕ್ಷತೆಗೆ ಸಂಬಂಧಿಸಿದ ಈ ಸಮಸ್ಯೆಗೆ ಕುಂಭಾಸಿ ಗ್ರಾಮ ಪಂಚಾಯತ್ ಯಾವಾಗ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
 ರಸ್ತೆ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ. 

Ads on article

Advertise in articles 1

advertising articles 2

Advertise under the article