Udupi ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ರಿ ಉಡುಪಿ ಜಿಲ್ಲೆ ಹಾಗೂ ಅಂಬೇಡ್ಕರ್ ಸೇನೆ ವತಿಯಿಂದ ಜಂಟಿ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
Sunday, July 5, 2026
ಕುಂದಾಪುರ: ಜುಲೈ 4ರಂದು ಶನಿವಾರ ಬೆಳಗ್ಗೆ ತ್ರಾಸಿ ಪ್ರೆಸ್ಟೀಜ್ ಪ್ಯಾಲೇಸ್ NH 66 ರಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ರಿ ಉಡುಪಿ ಜಿಲ್ಲೆ ಹಾಗೂ ಅಂಬೇಡ್ಕರ್ ಸೇನೆ ವತಿಯಿಂದ ಜಂಟಿ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು
ಕಾರ್ಯಕ್ರಮದ ಅಧ್ಯಕ್ಷತೆ ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರುಡೇಶ್ವರ್ ಅವರು ವಹಿಸಿ ಪತ್ರಕರ್ತರು ಸಂವಿಧಾನದ ನಾಲ್ಕನೇ ಅಂಗ ಹಾಗಾಗಿ ಶಾಸಕಾಂಗ ನ್ಯಾಯಾಂಗ ಕಾರ್ಯಾಂಗ ಇವುಗಳನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವಂತ ಬಹು ಮುಖ್ಯ ಪಾತ್ರ ವಹಿಸುತ್ತದೆ, ಸರಕಾರ ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ಬರಬೇಕು ಎಂದು ಹೇಳುವ ಮೂಲಕ ಪತ್ರಕರ್ತರಿಗೆ ಧೈರ್ಯ ತುಂಬಿದರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ರಿ ಬೆಂಗಳೂರು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಉದ್ಘಾಟನೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಸಮಾನತೆ ಮತ್ತು ಅಕ್ರಮಗಳನ್ನು ಜನರ ಮುಂದೆ ತರುವ ಪ್ರಮುಖ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ ಎಂದು ಹೇಳಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಸ್ತಂಭವಾಗಿರುವ ಮಾಧ್ಯಮಗಳು ಜನರಿಗೆ ನಿಖರ ಹಾಗೂ ವಿಶ್ವಾಸಾರ್ಹ ಮಾಹಿತಿಯನ್ನು ತಲುಪಿಸುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕೆಂದು ಅವರು ಕರೆ ನೀಡಿದರು.
ಸುದ್ದಿ ಸಂಗ್ರಹಣೆ ಮತ್ತು ಪ್ರಸಾರದ ವೇಳೆ ಅನೇಕ ಪತ್ರಕರ್ತರು ಜೀವದ ಹಂಗನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸುತ್ತಾರೆ. ಅವರ ಕುಟುಂಬದ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಪತ್ರಕರ್ತರ ಕಲ್ಯಾಣಕ್ಕಾಗಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕಾನಿಪ ಧ್ವನಿ ಸಂಘಟನೆ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷರಾದ ಡಾಕ್ಟರ್ ಪಿ ಮೂರ್ತಿ ಯವರು ಮಾತನಾಡಿ ಪತ್ರಕರ್ತರು , ಸತ್ಯ ಮತ್ತು ಜವಾಬ್ದಾರಿತನದಿಂದ ಕೂಡಿದ ಪತ್ರಿಕೋದ್ಯಮವೇ ಸಮಾಜಕ್ಕೆ ದಿಕ್ಕು ತೋರಬಲ್ಲದು ಎಂದರು. ವಾಸ್ತವಿಕತೆಯಿಂದ ದೂರ ಸರಿಯುವ ವರದಿಗಳು ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು
ಸಮಾರಂಭದಲ್ಲಿ 300ಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಉಚಿತ ನೋಂದಣಿ ನಡೆಸಿ ಕಾರ್ಮಿಕ ಗುರುತಿನ ಚೀಟಿಗಳನ್ನು ವಿತರಿಸಲಾಯಿತು
ಕಾರ್ಯಕ್ರಮದಲ್ಲಿ ನಿವೃತ್ತ ಭಾರತೀಯ ಸೈನಿಕರಿಗೆ ಸನ್ಮಾನ, ಹಿರಿಯ ಪತ್ರಕರ್ತರಿಗೆ ಸನ್ಮಾನ, ಸಮಾಜ ಸೇವಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಸನ್ಮಾನ, ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಮತ್ತು ಸಾಧಕರಿಗೆ ಸನ್ಮಾನ ನಡೆಯಿತು
ಕಾರ್ಯಕ್ರಮದ ವೇದಿಕೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರಭಾಕರ್ ಆ ರಾ ಪೂಜಾರಿ, ಕ್ಲಾಸಿಕ್ ಬಿಲ್ಡರ್ಸ್ ಉದ್ಯಮಿ ಪ್ರಭಾಕರ್ ಪೂಜಾರಿ ಉಡುಪಿ, ಕರವೇ ಕುಂದಾಪುರ ತಾಲೂಕು ಅಧ್ಯಕ್ಷ ಶಿವ ಆರ್ ಪೂಜಾರಿ, ಗಂಗೊಳ್ಳಿ ಪೊಲೀಸ್ ತಣಾಧಿಕಾರಿ ಪವನ್ ನಾಯ್ಕ್, ಡಾ. ಶ್ವೇತ ಆಚಾರ್ಯ ಶಿವಮೊಗ್ಗ , ಸಾಗರ್ ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷರು ಬೆಂಗಳೂರು ರಾಮನಗರ ಜಿಲ್ಲೆ, ವಿಜೇಂದ್ರ ಕುಮಾರ್ ಕಾರ್ಮಿಕ ಇಲಾಖೆ ನಿರೀಕ್ಷಕರು, ಕುಮಾರ್ ನಾಯಕ್ ಭಟ್ಕಳ, ಸುಭಾಷ್ ಶೆಟ್ಟಿ ಪತ್ರಕರ್ತರು ಉಡುಪಿ, ಸೇರಿದಂತೆ ಪತ್ರಕರ್ತರು, ಹಾಗೂ ಅಂಬೇಡ್ಕರ್ ಸೇನೆ ಪದಾಧಿಕಾರಿಗಳು ಹಾಜರಿದ್ದರು
ಪ್ರಾರ್ಥನೆ ವೈಷ್ಣವಿ ಅರುಣ್ ಆಚಾರ್ಯ ಅರಾಟೆ, ಸ್ವಾಗತ ಭಾಷಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ರಿ ಉಡುಪಿ ಜಿಲ್ಲಾಧ್ಯಕ್ಷ ದಾಮೋದರ ಮೊಗವೀರ ನಾಯಕವಾಡಿ, ಪ್ರಸ್ತಾವಿಕ ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಸತೀಶ್ ಕಂಚುಗೋಡು, ನಿರೂಪಣೆ ಧನ್ಯವಾದ ಸುಂದರ್ ಗಂಗೊಳ್ಳಿ ವಂದಿಸಿದರು.