udupi ಬೈಂದೂರು: ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತರ ಹಣ ಕಳ್ಳತನ: ಮೂವರು ಆರೋಪಿಗಳು ಅರೆಸ್ಟ್
Monday, July 6, 2026
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಕಳ್ಳತನವಾಗಿತ್ತು.
ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೇ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ದೇವಸ್ಥಾನದ ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಛಾಯಾಚಿತ್ರಗಳ ಆಧಾರದ ಮೇಲೆ ತನಿಖೆ ನಡೆಸಿದರು.
ತನಿಖೆಯಲ್ಲಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಮಹಿಳೆಯರ ಸುಳಿವು ಪತ್ತೆಯಾಗಿತ್ತು. ಕಳ್ಳತನ ನಡೆದ 24 ಗಂಟೆಯೊಳಗೆ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರ ಕಾರ್ಯಾಚರಣೆಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಸೇರಿದಂತೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತವಾಗಿದೆ