ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

UKಭಟ್ಕಳ: ಕೋರ್ಟ್ ಮಾನಿಟರಿಂಗ್‌ನಲ್ಲಿ ಅತ್ಯುತ್ತಮ ಸಾಧನೆ:  ‘Cop of the Month’  ಪ್ರಶಸ್ತಿ

UKಭಟ್ಕಳ: ಕೋರ್ಟ್ ಮಾನಿಟರಿಂಗ್‌ನಲ್ಲಿ ಅತ್ಯುತ್ತಮ ಸಾಧನೆ: ‘Cop of the Month’ ಪ್ರಶಸ್ತಿ

ಭಟ್ಕಳ: ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಹಾಗೂ ಕೋರ್ಟ್ ಮಾನಿಟರಿಂಗ್ ಕಾರ್ಯವನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಮುರ್ಡೇಶ್ವರ ಪೊಲೀಸ್ ಠಾಣೆಯ WHC-1601 ವನಿತಾ ನಾಯ್ಕ್ ಅವರು ‘Cop of the Month’ (ತಿಂಗಳ ಅತ್ಯುತ್ತಮ ಪೊಲೀಸ್) ಗೌರವಕ್ಕೆ ಆಯ್ಕೆಯಾಗಿದ್ದಾರೆ.

ಕೋರ್ಟ್‌ಗೆ ಸಂಬಂಧಿಸಿದ ಪ್ರಕರಣಗಳ ಮೇಲ್ವಿಚಾರಣೆ ಹಾಗೂ ದಾಖಲೆಗಳ ನಿರ್ವಹಣೆಯಲ್ಲಿ ತೋರಿದ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಪರಿಗಣಿಸಿ ಪೊಲೀಸ್ ಇಲಾಖೆ ಈ ಗೌರವವನ್ನು ನೀಡಿ ಸನ್ಮಾನಿಸಿದೆ.
ಈ ಸಾಧನೆಗಾಗಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ವನಿತಾ ನಾಯ್ಕ್ ಅವರನ್ನು ಅಭಿನಂದಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕರ್ತವ್ಯನಿಷ್ಠೆ ಮತ್ತು ಸಮರ್ಪಣಾ ಮನೋಭಾವದೊಂದಿಗೆ ಸೇವೆ ಸಲ್ಲಿಸುವಂತೆ ಶುಭ ಹಾರೈಸಿದ್ದಾರೆ.

ವನಿತಾ ನಾಯ್ಕ್ ಅವರಿಗೆ ದೊರೆತಿರುವ ಈ ಗೌರವವು ಮುರ್ಡೇಶ್ವರ ಪೊಲೀಸ್ ಠಾಣೆಯ ಹೆಮ್ಮೆಯ ಸಾಧನೆಯಾಗಿದ್ದು, ಇಲಾಖೆಯ ಇತರ ಸಿಬ್ಬಂದಿಗೂ ಉತ್ತಮ ಕಾರ್ಯನಿರ್ವಹಣೆಗೆ ಸ್ಫೂರ್ತಿಯಾಗಲಿದೆ.

Ads on article

Advertise in articles 1

advertising articles 2

Advertise under the article