BIG BREAKING: ಮರವಂತೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರಪಾಲು
Wednesday, August 26, 2026
ಬೈಂದೂರು: ಮರವಂತೆ ಮೀನುಗಾರಿಕೆ ಬಂದರು ಸಮೀಪದ ಶ್ರೀ ರಾಮ ಮಂದಿರ ಬಳಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಮುದ್ರದ ಅಬ್ಬರದ ಅಲೆಗಳಿಗೆ ಸಿಲುಕಿ ದೋಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ದಿನನಿತ್ಯದಂತೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದೋಣಿಯಿಂದ ಸಮುದ್ರಕ್ಕೆ ಬಿದ್ದ ಅವರನ್ನು ಸ್ಥಳೀಯ ಮೀನುಗಾರರು ಸುಮಾರು ಒಂದು ಗಂಟೆ ಕಾಲ ಸಮುದ್ರದಲ್ಲಿ ಹುಡುಕಾಟ ನಡೆಸಿ, ಬಳಿಕ ಮೃತದೇಹವನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ನಂತರ ಕುಂದಾಪುರದ ಆಂಬುಲೆನ್ಸ್ ಡೈವರ್ ಮಂಜುನಾಥ್ ಅವರ ಮೂಲಕ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.