COSTALNEWS/ ತೆಕ್ಕಟೆ: ಪಿ ಎಂ ಶ್ರಿ K P S ಕುವೆಂಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮ
Saturday, August 15, 2026
ತೆಕ್ಕಟೆ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಕುವೆಂಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಮುಖ ಹಂತವಾಗಿ ಧ್ವಜಾರೋಹಣವನ್ನು ಭಾರತೀಯ ಮಾಜಿ ಸೈನಿಕರಾದ ರವಿಚಂದ್ರ ಶೆಟ್ಟಿ ತೆಕ್ಕಟೆ ನೆರವೇರಿಸಿ, ದೇಶಕ್ಕಾಗಿ ಸೈನಿಕರ ತ್ಯಾಗ ಮತ್ತು ಸೇವಾ ಮನೋಭಾವವನ್ನು ಸ್ಮರಿಸಿದರು.
ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ನಯನಮನೋಹರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ದೇಶಭಕ್ತಿ ಗೀತೆಗಳು ಹಾಗೂ ಸಾಂಸ್ಕೃತಿಕ ನೃತ್ಯ ರೂಪಕಗಳು ನೆರೆದಿದ್ದ ಸಾರ್ವಜನಿಕರ ಮತ್ತು ಪೋಷಕರ ಗಮನ ಸೆಳೆದವು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾವತಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸರ್ವ ದೇಶಾಭಿಮಾನಿಗಳು, ಸಾರ್ವಜನಿಕರು ಹಾಗೂ ಪೋಷಕರನ್ನು ಆಶೀರ್ವದಿಸಿ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಸಮಾರಂಭದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ವರದಿ: ಸೌಮ್ಯ ಸಂದೀಪ್ ಕಾಂಚನ್ COSTALNEWS ಕುಂದಾಪುರ