ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS/ ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ವೈಭವಸಮಾಜಸೇವಕ ರವಿ ಶೆಟ್ಟಿಗೆ ‘ಶ್ರೀ ನಾಗಾನುಗ್ರಹ ಪ್ರಶಸ್ತಿ’ ಪ್ರದಾನ

COSTALNEWS/ ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ವೈಭವಸಮಾಜಸೇವಕ ರವಿ ಶೆಟ್ಟಿಗೆ ‘ಶ್ರೀ ನಾಗಾನುಗ್ರಹ ಪ್ರಶಸ್ತಿ’ ಪ್ರದಾನ

ಬೈಂದೂರು: ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸನ್ನಿಧಿಯಲ್ಲಿ ನಾಗರ ಪಂಚಮಿ ಅಂಗವಾಗಿ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ಸಿದ್ಧತೆ ನಡೆದಿದೆ. ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮರವಂತೆ ಹಾಗೂ ಶ್ರೀ ಸುಬ್ರಹ್ಮಣ್ಯ ಸನ್ನಿಧಿ ಟ್ರಸ್ಟ್ ವತಿಯಿಂದ ಸಮಾಜಸೇವಕ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್ ಅಧ್ಯಕ್ಷ ರವಿ ಶೆಟ್ಟಿ ಬೈಂದೂರು ಅವರಿಗೆ ಸಮಾಜ ಸೇವೆಯನ್ನು ಗುರುತಿಸಿ ಗೌರವಪೂರ್ವಕವಾಗಿ ‘ಶ್ರೀ ನಾಗಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.
ನಾಗರ ಪಂಚಮಿ ಪ್ರಯುಕ್ತ ಬೆಳಗ್ಗೆ ತಾಲೂಕು ಭಜನಾ ಒಕ್ಕೂಟದ ಬೈಂದೂರು ವಲಯದ ಜಯಕರ ಗುಲ್ವಾಡಿ ಹಾಗೂ ಸಂಗಡಿಗರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ದೇವರಿಗೆ ವಿಶೇಷ ಪೂಜೆ, ಮಹಾಪೂಜೆ ಹಾಗೂ ಶ್ರೀ ನಾಗದೇವರ ಸಾರ್ವಜನಿಕ ಮಹಾ ಅನ್ನಪ್ರಸಾದ ಸಂತರ್ಪಣೆ ಆಯೋಜಿಸಲಾಗಿದೆ.
ಪೂರ್ವಾಹ್ನ 11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾದಿಕಾರಿ ವೇ. ಮೂ. ಲೋಕೇಶ ಅಡಿಗ ಬಡಾಕೆರೆ, ಮರವಂತೆ ಶ್ರೀ ವರಾಹ ದೇವಸ್ಥಾನದ ಮಾಜಿ ಧರ್ಮದರ್ಶಿ ಸತೀಶ್ ನಾಯಕ್, ಜ್ಯೋತಿಷ್ಯ ಹಾಗೂ ವಾಸ್ತು ತಜ್ಞ ಡಾ.ಬಸವರಾಜ್ ಶೆಟ್ಟಿಗಾರ್, ಮರವಂತೆ ಬೈಂದೂರು ಭಾರತೀಯ ಜನತಾ ಪಾರ್ಟಿ ಅಧ್ಯಕ್ಷೆ ಅನಿತಾ ಆರ್. ಕೆ, ಉದ್ಯಮಿ ಅಶೋಕ ಶೆಟ್ಟಿ ಸಂಸಾಡಿ, ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ, ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದದ ಅಧ್ಯಕ್ಷ ಜಗದೀಶ ಪೂಜಾರಿ ಹಕ್ಕಾಡಿ, ನಾವುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನರಸಿಂಹ ದೇವಾಡಿಗ, ಶ್ರೀ ಕ್ಷೇತ್ರ ಕೊಲ್ಲೂರಿನ ಮಾಜಿ ಧರ್ಮದರ್ಶಿ ಜಯರಾಮ ಶೆಟ್ಟಿ ವಂಡಬಳ್ಳಿ, ಸತೀಶ ಪೂಜಾರಿ ಮರವಂತೆ ಗಂಗೊಳ್ಳಿ ಮನೆ, ಉದ್ಯಮಿ ಗೋವಾ, ಗೋವಿಂದ ಎಮ್. ನಾಯ್ಕನಕಟ್ಟೆ, ದೇವಳದ ಗೌರವ ಸಲಹೆಗಾರ ಸಿ. ಎಸ್. ಖಾರ್ವಿ ಕೊಡೇರಿ, ಧರ್ಮದರ್ಶಿ ತಿಮ್ಮ ವಿ. ದೇವಾಡಿಗ ಮತ್ತು ಧರ್ಮ ಪತ್ನಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.
ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು, ಧಾರ್ಮಿಕ ಮುಖಂಡರು, ಉದ್ಯಮಿಗಳು ಹಾಗೂ ಸಮಾಜದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿ ವೇ. ಮೂ. ಲೋಕೇಶ ಅಡಿಗ ಬಡಾಕೆರೆ, ಮರವಂತೆ ಶ್ರೀ ವರಾಹ ದೇವಸ್ಥಾನದ ಮಾಜಿ ಧರ್ಮದರ್ಶಿ ಸತೀಶ್ ಜಿ. ನಾಯಕ್, ಜ್ಯೋತಿಷ್ಯ ಹಾಗೂ ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರ್, ಬಿಜೆಪಿ ಬೈಂದೂರು ಅಧ್ಯಕ್ಷೆ ಅನಿತಾ ಆರ್.ಕೆ., ಉದ್ಯಮಿಗಳಾದ ಅಶೋಕ ಶೆಟ್ಟಿ ಸಂಸಾಡಿ, ಮಂಜುನಾಥ ಪೂಜಾರಿ ಸೇನಾಪುರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.
ದೇವಸ್ಥಾನದ ಧರ್ಮದರ್ಶಿ ತಿಮ್ಮಪ್ಪ ದೇವಾಡಿಗ ಅವರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ನಾಗದೇವರ ಸನ್ನಿಧಿಗೆ ಆಗಮಿಸಿ ದೇವರ ದರ್ಶನ ಪಡೆದು, ಮುಡಿಗಂಧ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದ್ದಾರೆ.
ನಾಗರ ಪಂಚಮಿಯ ಧಾರ್ಮಿಕ ಭಕ್ತಿ, ಸಮಾಜ ಸೇವೆಗೆ ಸನ್ಮಾನ ಹಾಗೂ ಸಾರ್ವಜನಿಕ ಅನ್ನಪ್ರಸಾದ — ಮರವಂತೆಯಲ್ಲಿ ಭಕ್ತಿಭಾವದ ವಿಶೇಷ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

Ads on article

Advertise in articles 1

advertising articles 2

Advertise under the article