COSTALNEWS/ಕುಂದಾಪುರ: ಪುರಸಭೆಯ ಕಟ್ಟಡದಲ್ಲಿ ಕಳೆದ ಹಲವು ದಿನಗಳಿಂದ ಲಿಫ್ಟ್ ದುಸ್ಥಿತಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ..!
Monday, August 10, 2026
ಕುಂದಾಪುರ ಪುರಸಭೆಯ ಕಟ್ಟಡದಲ್ಲಿರುವ ಲಿಫ್ಟ್ ಕಳೆದ ಹಲವು ದಿನಗಳಿಂದ ದುರಸ್ತಿಗೊಂಡಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ವಿಶೇಷವಾಗಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಮೇಲಿನ ಮಹಡಿಗಳಿಗೆ ತೆರಳಲು ಪರದಾಡುವಂತಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದಾಪುರ ಪುರಸಭೆ ಕಚೇರಿಗೆ ಪ್ರತಿನಿತ್ಯ ನೂರಾರು ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗಮಿಸುತ್ತಾರೆ.
ಆದರೆ, ಪುರಸಭೆಯ ಕಟ್ಟಡದಲ್ಲಿರುವ ಲಿಫ್ಟ್ ಕಳೆದ ಹಲವು ದಿನಗಳಿಂದ ದುರಸ್ತಿಯಲ್ಲಿದ್ದು, ಇನ್ನೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪುರಸಭೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಲು ಮೇಲಿನ ಮಹಡಿಗಳಿಗೆ ತೆರಳಬೇಕಾದ ಪರಿಸ್ಥಿತಿ ಇದ್ದು, ಹಿರಿಯ ವಯಸ್ಕರು, ವಿಕಲಚೇತನರು ಹಾಗೂ ಆರೋಗ್ಯ ಸಮಸ್ಯೆ ಇರುವವರಿಗೆ ಮೆಟ್ಟಿಲು ಹತ್ತುವುದು ಕಷ್ಟಕರವಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಜವಾಬ್ದಾರಿ ಹೊಂದಿರುವ ಪುರಸಭೆಯಲ್ಲೇ ಲಿಫ್ಟ್ ಕಾರ್ಯನಿರ್ವಹಿಸದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಲಿಫ್ಟ್ ದುರಸ್ತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಎಂಬುದು ಸ್ಥಳೀಯರ ಒತ್ತಾಯ.
ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ: ಸುರೇಶ್ ಅಮಾಸೆ ಬೈಲು