ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS/ ಬೈಂದೂರು: ಮರವಂತೆ ಬಂದರಿನಲ್ಲಿ ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಪರಿಹಾರಕ್ಕೆ ಸಚಿವರಿಗೆ ಮನವಿ

COSTALNEWS/ ಬೈಂದೂರು: ಮರವಂತೆ ಬಂದರಿನಲ್ಲಿ ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಪರಿಹಾರಕ್ಕೆ ಸಚಿವರಿಗೆ ಮನವಿ

ಬೈಂದೂರು: ಮರವಂತೆ ಮೀನುಗಾರಿಕಾ ಬಂದರಿನಲ್ಲಿ ಇತ್ತೀಚೆಗೆ ಭಾರಿ ಗಾಳಿಯ ಅಬ್ಬರಕ್ಕೆ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ನಾಗರಾಜ ಖಾರ್ವಿ ಅವರ ಕುಟುಂಬಕ್ಕೆ ತಕ್ಷಣ ಸರ್ಕಾರದಿಂದ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ.
ಮೀನುಗಾರಿಕೆಯನ್ನೇ ಜೀವನಾಧಾರವಾಗಿಸಿಕೊಂಡಿದ್ದ ನಾಗರಾಜ ಖಾರ್ವಿ ಅವರು ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಇದರಿಂದ ಅವರ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡ ಮೀನುಗಾರ ಕುಟುಂಬಕ್ಕೆ ಸರ್ಕಾರ ಕೂಡಲೇ ಸ್ಪಂದಿಸಿ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಪತ್ರಕರ್ತ ನಾಗರಾಜ್ ಮರವಂತೆ ಅವರು ಬೆಂಗಳೂರಿನಲ್ಲಿ ರಾಜ್ಯದ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಶ್ರೀ ಬಸವಂತಪ್ಪ ಅವರನ್ನು ಭೇಟಿಯಾಗಿ, ಘಟನೆ ಕುರಿತು ವಿವರಿಸಿ ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸುವಂತೆ ಮನವಿ ಸಲ್ಲಿಸಿದರು.
ಮೀನುಗಾರರ ಸುರಕ್ಷತೆ ಹಾಗೂ ಸಂಕಷ್ಟದಲ್ಲಿರುವ ಮೀನುಗಾರ ಕುಟುಂಬಗಳ ನೆರವಿಗೆ ಸರ್ಕಾರ ಆದ್ಯತೆ ನೀಡಬೇಕು. ನಾಗರಾಜ ಖಾರ್ವಿ ಅವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ತಕ್ಷಣ ಪರಿಹಾರ ಒದಗಿಸುವಂತೆ ಸಚಿವರಲ್ಲಿ ಒತ್ತಾಯಿಸಲಾಗಿದೆ.
ಸಂತ್ರಸ್ತ ಬಡ ಮೀನುಗಾರ ಕುಟುಂಬಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕೆಂಬುದು ಕುಟುಂಬಸ್ಥರು ಹಾಗೂ ಸ್ಥಳೀಯರ ಪ್ರಮುಖ ಮನವಿಯಾಗಿದೆ.

Ads on article

Advertise in articles 1

advertising articles 2

Advertise under the article