ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS/ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಹೊಸಾಡಿನಲ್ಲಿ   ಸಿ ಎಸ್ ಆರ್ ಅನುದಾನದಿಂದ  ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ.

COSTALNEWS/ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡಿನಲ್ಲಿ ಸಿ ಎಸ್ ಆರ್ ಅನುದಾನದಿಂದ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ.

ಬೈಂದೂರು: ಕ್ಯಾನ್ಫಿನ್ ಹೊಮ್ಸ್ ಪ್ರೈವೇಟ್ ಲಿಮಿಟೆಡ್ ಇವರ ಸಿ ಎಸ್ ಆರ್ ಅನುದಾನದಿಂದ ಹಾಗೂ ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯ ಪರಿಕಲ್ಪನೆಯಡಿಯಲ್ಲಿ ಹೊಸಾಡು ಶಾಲೆಗೆ ಸುಮಾರು ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲು ಅನುಮೋದನೆ ದೊರೆತಿದ್ದು, ಇದರ ಭೂಮಿ ಪೂಜೆ ಕಾರ್ಯವನ್ನು ಮಾನ್ಯ ವಿಧಾನ ಸಭಾ ಶಾಸಕರಾದ ಶ್ರೀ ಗುರುರಾಜ ಗಂಟಿ ಹೊಳೆ ಇವರು ನೆರವೇರಿಸಿದರು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಲಾಯಿತು. ಶಾಲೆ ಹಾಗೂ ಸಮಾಜದ ಒಗ್ಗೂಡುವಿಕೆಯಿಂದ ಉತ್ತಮ ಕಾರ್ಯ ಯೋಜನೆಗಳನ್ನು ಕೈಗೊಳ್ಳಲು ಮುಂದಾಗಬಹುದು ಎಂದು ಕರೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ರೇಖಾ ಗಣೇಶ್, ಉಪಾಧ್ಯಕ್ಷರಾದ ಶ್ರೀ ರಾಘವೇಂದ್ರ ಆಚಾರ್ಯ ಹಾಗೂ ಸರ್ವ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರ ಶೇಖರ ಪೂಜಾರಿ ಅರಾಟೆ ಹಾಗೂ ಪದಾಧಿಕಾರಿಗಳು, ಬೈಂದೂರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾಗಿರುವ ಶ್ರೀ ವಿಜಯ ಕುಮಾರ್ ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳಾದ ಶ್ರೀ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ, ಗುರುಕಿರಣ್, ಸಂತೋಷ್ ಮೊಗವೀರ, ಶಾಂತರಾಮ ಶೆಟ್ಟಿ,ಅರುಣ್ ಆಚಾರ್ಯ,
ಮುಂತಾದವರು ಉಪಸ್ಥಿತರಿದ್ದರು.ಶಾಲಾ ಶಿಕ್ಷಕ ವರ್ಗ,ಹಾಗೂ ಅಡುಗೆ ಸಿಬ್ಬಂದಿಗಳು ಸಹಕರಿಸಿದರು 
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಸ್ವಾಗತಿಸಿ ಸಹಶಿಕ್ಷಕಿ ಶ್ರೀಮತಿ ಪ್ರತಿಮಾ. ಜಿ ನಿರೂಪಿಸಿ ವಂದಿಸಿದರು*

Ads on article

Advertise in articles 1

advertising articles 2

Advertise under the article