ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS/ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:  ಮತ್ತೋರ್ವ ಆರೋಪಿ ಎನ್‌ಐಎ ಬಲೆಗೆ

COSTALNEWS/ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಎನ್‌ಐಎ ಬಲೆಗೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ಮತ್ತೊಂದು ಮಹತ್ವದ ಯಶಸ್ಸು ಸಿಕ್ಕಿದೆ. 

ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಉಮ್ಮರ್ ಫಾರೂಕ್‌ನನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. 

ಈ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರ ಪಾತ್ರ ಬೆಳಕಿಗೆ ಬಂದಿದ್ದು, ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.

ಸುಳ್ಯ ಮೂಲದ ಉಮ್ಮರ್ ಫಾರೂಕ್ ಪ್ರಕರಣದ 13ನೇ ಆರೋಪಿಯಾಗಿದ್ದು, ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂಬ ಆರೋಪ ಇದೆ. ಎನ್‌ಐಎ ವಾಂಟೆಡ್ ಪಟ್ಟಿಯಲ್ಲಿದ್ದ ಉಮ್ಮರ್ ಫಾರೂಕ್ ಕುರಿತು ಮಾಹಿತಿ ನೀಡಿದವರಿಗೆ 2 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಲಾಗಿತ್ತು.

ಇತ್ತೀಚೆಗೆ ಇದೇ ಪ್ರಕರಣದ ಆರೋಪಿಗಳಾದ ನೌಷಾದ್ ಮತ್ತು ನಾಸೀರ್ ಬಂಧನದ ವೇಳೆ ದೊರೆತ ಮಾಹಿತಿಯ ಆಧಾರದಲ್ಲಿ ಎನ್‌ಐಎ ಅಧಿಕಾರಿಗಳು ಕೊಚ್ಚಿಯಲ್ಲಿ ಕಾರ್ಯಾಚರಣೆ ನಡೆಸಿ ಉಮ್ಮರ್ ಫಾರೂಕ್‌ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Ads on article

Advertise in articles 1

advertising articles 2

Advertise under the article