ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS/ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿ.ನಾಗೇಂದ್ರ ನಿರ್ಧಾರ

COSTALNEWS/ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿ.ನಾಗೇಂದ್ರ ನಿರ್ಧಾರ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಭಾರೀ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ನಿರಂತರ ಒತ್ತಡ ಹಾಕುತ್ತಿವೆ. ಇತ್ತೀಚಿನ ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಅಡ್ಡಿಯಾಗಿ ನಿಗದಿತ ದಿನಕ್ಕಿಂತ ಮೂರು ದಿನ ಮೊದಲೇ ಮೊಟಕುಗೊಳಿಸಲಾಗಿತ್ತು. ಇದೀಗ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ. ನನ್ನನ್ನು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗೋದು ಬೇಡ ಎಂದು ನಾಗೇಂದ್ರ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಿಎಂ ಜೊತೆಗೆ 15 ನಿಮಿಷಗಳ ಕಾಲ ಸಚಿವ ನಾಗೇಂದ್ರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ಜೊತೆ ಚರ್ಚಿಸಿ ತಿಳಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ, ಹೈಕಮಾಂಡ್‌ನೊಂದಿಗೆ ಚರ್ಚಿಸುವವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದ್ದರೂ, ಪಕ್ಷಕ್ಕೆ ಮುಜುಗರ ಉಂಟುಮಾಡಲು ತಾನು ಬಯಸುವುದಿಲ್ಲ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಲಿತರು ಸಚಿವರಾಗಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ರಾಜೀನಾಮೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದ್ದು, ಇಂದು ಸಂಜೆಯೇ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Ads on article

Advertise in articles 1

advertising articles 2

Advertise under the article