ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS/ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

COSTALNEWS/ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

ಬ್ರಹ್ಮಾವರ: ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ ಅಳವಡಿಸಿದ ಸಿಸಿ ಕ್ಯಾಮೆರಾ ಮತ್ತು ಅದರ ನಿಯಂತ್ರಣ ಕೊಠಡಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಡುಪಿಯ ಶಾಸಕರಾದ ಯಶ್ ಪಾಲ್ ಸುವರ್ಣ ಸಿಸಿ ಕ್ಯಾಮೆರಾ ಉದ್ಘಾಟನೆ ನಡೆಸಿದ್ದು ಉಡುಪಿಯ ವಕೀಲರಾದ ಆರೂರು ಸುಕೇಶ್ ಶೆಟ್ಟಿ ಅದರ ನಿಯಂತ್ರಣ ಕೊಠಡಿಯ ಉದ್ಘಾಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಕುಲಾಲ್,
ನೀಲಮ್ಮ ಚಾರಿಟೇಬಲ್ ಟ್ರಸ್ಟಿನ ಆರೂರು ತಿಮ್ಮಪ್ಪ ಶೆಟ್ಟಿ ,ಆರೂರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ರತ್ನಾಕರ ಭಟ್ ಆರೂರು, ಉದ್ಯಮಿ ಶ್ರೀಧರ್ ಶೆಟ್ಟಿ ಆರೂರು ,ಕಮಲಾಕ್ಷ್ ಹೆಬ್ಬಾರ್ , ಹರೀಶ್ ಶೆಟ್ಟಿ ಚೇರ್ಕಾಡಿ, ಚಂದ್ರಶೇಖರ್ ಕಲ್ಕೂರ ,ಶ್ರೀ ವಿಷ್ಣುಮೂರ್ತಿ ಯುವಕ ಮಂಡಲದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
 ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗುರುರಾಜ್ ರಾವ್ ಆರೂರು ಪ್ರಾಸ್ತಾವಿಕ ಮಾತನಾಡಿದರು. ವಿಷ್ಣುಮೂರ್ತಿ ಯುವಕ ಮಂಡಲದ ಅಧ್ಯಕ್ಷ ಸಿಎ ಅಶ್ವತ್ ಶೆಟ್ಟಿ ಸ್ವಾಗತಿಸಿದರು ಯಾದವ್ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ವಿಷ್ಣು ಪ್ರಸಾದ್ ವಂದಿಸಿದರು.

Ads on article

Advertise in articles 1

advertising articles 2

Advertise under the article