COSTALNEWS/ ಕುಂದಾಪುರ: ಬರೋಬ್ಬರಿ 16 ಅಡಿ ಹೆಬ್ಬಾವು — ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ! : ಆನಂದ ಬಳೆಗಾರ
Wednesday, September 2, 2026
ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಪುರಾಣಿಹೊಳಲು ಪ್ರದೇಶದಲ್ಲಿ ಶ್ರೀ. ಸಂಜೀವ ಅವರ ಮನೆಗೆ ಸುಮಾರು 16 ಅಡಿ ಉದ್ದದ ಬೃಹತ್ ಹೆಬ್ಬಾವು ಬಂದ ಘಟನೆ ನಡೆದಿದೆ.
ಮನೆ ಸಮೀಪ ಬೃಹತ್ ಹೆಬ್ಬಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಬೀಟ್ ಫಾರೆಸ್ಟರ್ ಶ್ರೀ. ಆನಂದ ಬಳೆಗಾರ ಅವರು ಅತ್ಯಂತ ಜಾಗರೂಕತೆಯಿಂದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು, ಯಾವುದೇ ಅಪಾಯವಾಗದಂತೆ ರಕ್ಷಿತ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಡುವ ಮೂಲಕ ರಕ್ಷಣೆ ಮಾಡಿದ್ದಾರೆ.
ಅರಣ್ಯ ಪ್ರದೇಶದಿಂದ ಆಹಾರ ಅರಸಿ ಕಾಡುಪ್ರಾಣಿಗಳು ಹಾಗೂ ಸರಿಸೃಪಗಳು ಜನವಸತಿ ಪ್ರದೇಶಗಳಿಗೆ ಆಗಮಿಸುವ ಸಾಧ್ಯತೆ ಇದ್ದು, ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಆತಂಕಕ್ಕೊಳಗಾಗದೆ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಆನಂದ ಬಳೆಗಾರ ರವರು ಗ್ರಾಮಸ್ಥರಿಗೆ ತಿಳಿಸಿದ್ದರು
ಬೃಹತ್ ಹೆಬ್ಬಾವಿನ ರಕ್ಷಣೆ — ಅರಣ್ಯ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ!