COSTALNEWS /ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ವಿರುದ್ಧ ದಾಳಿ – ರೂ.16 ಲಕ್ಷ ಮೌಲ್ಯದ ಸೊತ್ತು ವಶ ..!
Wednesday, September 23, 2026
ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಬಗ್ಗೆ ಕಾಲ್ತೋಡು ಬೀಟ್ ಅಧಿಕಾರಿಯವರು ನೀಡಿದ ಮಾಹಿತಿಯ ಮೇರೆಗೆ ಇಂದು ಬೈಂದೂರು ಠಾಣೆಯ ಪಿ.ಎಸ್.ಐ. ಸುನಿಲ್ ಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಬರಮಾಡಿಕೊಂಡು, ಮಧ್ಯಾಹ್ನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದರು.
ದಾಳಿಯ ಸಂದರ್ಭದಲ್ಲಿ ಗಣಿಗಾರಿಕೆ ಸ್ಥಳದಲ್ಲಿದ್ದ ಕೆಂಪುಕಲ್ಲು ತುಂಬಿದ 2 ಟಿಪ್ಪರ್ಗಳು, ಬ್ಲೇಡ್ ಅಳವಡಿಸಿರುವ 2 ಪವರ್ ಟಿಲ್ಲರ್ ಮೆಷಿನ್ಗಳು ಹಾಗೂ 2 ಕಲ್ಲು ಎತ್ತುವ ಟ್ರಾಲಿ ಮೆಷಿನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂ.16 ಲಕ್ಷ ಆಗಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ ರವೀಂದ್ರ ಪೂಜಾರಿ ಮತ್ತು ಸತೀಶ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.