COSTALNEWS/ ಕುಂದಾಪುರ: ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಬೇಟಿ .! ಪಿಡಿಒ 400 ಅರ್ಜಿಗಳನ್ನು ಪಡೆದಿದ್ದಾರೆ ಎಂಬ ಆರೋಪ? ಲೋಕಾಯುಕ್ತ ದಾಳಿ - ಕಡತಗಳ ಪರಿಶೀಲನೆ
Thursday, September 17, 2026
ಕುಂದಾಪುರ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ
ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಿತು.
ಸರ್ಕಾರಿ ಸೌಲಭ್ಯ ಒದಗಿಸುವುದಾಗಿ ಪಿಡಿಒ ಅವರು ಸುಮಾರು 400 ಅರ್ಜಿಗಳನ್ನು ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಅಧಿಕಾರಿಗಳು ಮಾಹಿತಿ ಪರಿಶೀಲಿಸಿದರು. ಬೇಳೂರು ಗ್ರಾ.ಪಂ. ವ್ಯಾಪ್ತಿಯ ಕಲ್ಲು ಕೋರೆಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಈ ಪರಿಶೀಲನಾ ಕಾರ್ಯಾಚರಣೆ ನಡೆದಿದ್ದು, ಪಂಚಾಯಿತಿಯ ವಿವಿಧ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಹಾಗೂ ಇನ್ನು ಬೈಂದೂರು ಕುಂದಾಪುರ ತಾಲೂಕಿನ ಹಲವು ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಸಾಧ್ಯತೆ?
ಒಟ್ಟಾರೆಯಾಗಿ ಸಾರ್ವಜನಿಕರ ದೂರಿಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡುವುದು ಸಾರ್ವಜನಿಕ ವಲಯದಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ..!