ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS SPECIAL NEWS /  ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಗುರುವಂದನಾ ಕಾರ್ಯಕ್ರಮ..!

COSTALNEWS SPECIAL NEWS / ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಗುರುವಂದನಾ ಕಾರ್ಯಕ್ರಮ..!

ಉಡುಪಿ:
ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ 2026–27ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರ್ಕಾರಿ ಶಾಲೆಗಳ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಮಹತ್ವದ ಕಾರ್ಯಕ್ರಮ ಇದಾಗಿದೆ.
ಶಿಕ್ಷಕರ ಸೇವೆ, ಸಮರ್ಪಣೆ, ಬೋಧನಾ ಕಾರ್ಯಕ್ಷಮತೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಅಮೂಲ್ಯ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಗುರುವಂದನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಗುತ್ತದೆ.
ಶಿಕ್ಷಕರನ್ನು ಗೌರವಿಸುವುದು ಎಂದರೆ
ಭವಿಷ್ಯದ ಪೀಳಿಗೆಯನ್ನು ರೂಪಿಸುವ ಜ್ಞಾನ ದೀಪಗಳಿಗೆ ಗೌರವ ಸಲ್ಲಿಸಿದಂತೆ.
ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುವ ಈ ವಿಶೇಷ ಕಾರ್ಯಕ್ರಮಕ್ಕೆ ಶಿಕ್ಷಣಾಭಿಮಾನಿಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಅಬ್ದುಲ್ ಸಲಾಂ ಚಿತ್ತೂರು
 ಜಿಲ್ಲಾಧ್ಯಕ್ಷರು / ರಾಜ್ಯ ನಿರ್ದೇಶಕರು 
ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ರಿ.ಉಡುಪಿ ಜಿಲ್ಲಾ ಘಟಕ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ 

Ads on article

Advertise in articles 1

advertising articles 2

Advertise under the article