ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS ಗಂಗೊಳ್ಳಿ : ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

COSTALNEWS ಗಂಗೊಳ್ಳಿ : ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಹಾಗೂ ಸಮಾಜಮುಖಿ ಸೇವೆ ಸಲ್ಲಿಸಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
ಆರ್ಯಭಟ ಎಜುಕೇಶನಲ್ ಟ್ರಸ್ಟ್ ಹಾಗೂ ಕರ್ನಾಟಕ ಚೇತನ ಫೌಂಡೇಷನ್, ಧಾರವಾಡ ವತಿಯಿಂದ ಸೆ. 6ರಂದು ಬೆಂಗಳೂರಿನ ಎನ್.ಆರ್. ಕಾಲೋನಿಯ ಬಿ.ಎಂ.ಶ್ರೀ ಪ್ರತಿಷ್ಠಾನದ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ‘ಸಾಧಕರ ಸಮಾಗಮ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

ಶಿಕ್ಷಕ, ಸಮಾಜ ಸೇವಕ ಹಾಗೂ ಗಂಧದ ಗುಡಿ ಕನ್ನಡ ಸಂಘದ ಗೌರವಾಧ್ಯಕ್ಷ ಬಿ.ರಂಗಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ನವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಎಂ.ಆರ್. ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’, ಶಿಕ್ಷಣ ಕ್ಷೇತ್ರದ ಸಾಧಕರಿಗೆ ‘ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಹಾಗೂ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕರ್ನಾಟಕ ಚೇತನ ಫೌಂಡೇಷನ್ ಅಧ್ಯಕ್ಷ, ಜನತಾ ಪ್ರಭ ದಿನಪತ್ರಿಕೆಯ ಸಂಪಾದಕ ಹಾಗೂ ಆರ್ಯಭಟ ಎಜುಕೇಶನಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮಾಡಲಗೇರಿ ಅವರು ಕಾರ್ಯಕ್ರಮದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಲಭಿಸುತ್ತಿರುವ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ಅವರ ಸಾಮಾಜಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳ ಸಾಧನೆಗೆ ಮತ್ತಷ್ಟು ಪ್ರೋತ್ಸಾಹ ನೀಡಲಿದೆ. ಸಮಾಜಮುಖಿ ಕಾರ್ಯಗಳಲ್ಲಿ ಇನ್ನಷ್ಟು ತೊಡಗಿಸಿಕೊಂಡು ಸಮಾಜದ ಬೆನ್ನೆಲುಬಾಗಿ ನಿಲ್ಲಲು ಈ ಗೌರವ ಪ್ರೇರಣೆಯಾಗಲಿ ಎಂದು ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್, ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಎಚ್. ಶಶಿಧರ್ ನಾಯ್ಕ್ ಹಾಗೂ ಅಖಿಲ ಕರ್ನಾಟಕ ಕೋಟೆಗಾರ್ ಸಂಘದ ಅಧ್ಯಕ್ಷ ಡಾ.ಬಾಲಕೃಷ್ಣ ಎಸ್.ಮದ್ದೋಡಿ ಸೇರಿದಂತೆ ಹಿತೈಷಿಗಳು ಹಾಗೂ ಸಮಾಜದ ಹಿತಾಕಾಂಕ್ಷಿಗಳು ಶುಭ ಹಾರೈಸಿದ್ದಾರೆ.

Ads on article

Advertise in articles 1

advertising articles 2

Advertise under the article