ಕುಂದಾಪುರ: ಮಕ್ಕಳ ಭವಿಷ್ಯಕ್ಕೆ ಆದ್ಯತೆ ನೀಡಿದ ಈ ಕ್ರಮಕ್ಕೆ ಪೋಷಕರಿಂದ ಮೆಚ್ಚುಗೆ —DD ಪ್ರೇಮ್ ಮೂರ್ತಿ ರವರಿಗೆ ಗುಜ್ಜಾಡಿ ಗ್ರಾಮಸ್ಥರಿಂದ ಅಭಿನಂದನೆ.
Wednesday, September 30, 2026
ಕುಂದಾಪುರ: ಉಡುಪಿ ಜಿಲ್ಲೆಯ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಗುಜ್ಜಾಡಿ ನಾಯಕವಾಡಿ ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರಿಗೆ ಇದೀಗ ಸಂತಸದ ಸುದ್ದಿ.
ನಾಯಕವಾಡಿ ಅಂಗನವಾಡಿ ಕೇಂದ್ರಕ್ಕೆ ಕಾಯಂ ಟೀಚರ್ ನೇಮಕಗೊಳಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು (DD) ಪ್ರೇಮ ಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.
ಮಕ್ಕಳ ಶಿಕ್ಷಣ ಮತ್ತು ಆರೈಕೆಯ ದೃಷ್ಟಿಯಿಂದ ಕಾಯಂ ಶಿಕ್ಷಕಿ ನೇಮಕವಾಗಬೇಕು ಎಂಬ ಪೋಷಕರ ನಿರೀಕ್ಷೆಗೆ ಇಲಾಖೆ ಸ್ಪಂದಿಸಿರುವುದು ಇದೀಗ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
“ಸರ್ಕಾರದ ಕೆಲಸ ದೇವರ ಕೆಲಸ" ಎಂಬ ಮಾತಿಗೆ ತಕ್ಕಂತೆ, ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಮಕ್ಕಳ ಹಿತದೃಷ್ಟಿಯಿಂದ ಕ್ರಮ ಕೈಗೊಂಡಿರುವ DD ಪ್ರೇಮ ಮೂರ್ತಿ ಅವರ ಕಾರ್ಯಕ್ಕೆ ಮಕ್ಕಳ ಪೋಷಕರು ಹಾಗೂ ಗುಜ್ಜಾಡಿ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.