ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS /ಗಂಗೊಳ್ಳಿ ಪೊಲೀಸ್ ಠಾಣೆಗೆ ಮತ್ತೊಂದು ಗೌರವದ ಗರಿ!ರಾಜ್ಯಮಟ್ಟದಲ್ಲಿ 7ನೇ ಸ್ಥಾನ,  ಪೊಲೀಸರಿಗೆ ದಲಿತ ಸಂಘಟನೆಗಳ ಸಮನ್ವಯ ವೇದಿಕೆಯಿಂದ ಗೌರವಾಭಿನಂದನೆ.!

COSTALNEWS /ಗಂಗೊಳ್ಳಿ ಪೊಲೀಸ್ ಠಾಣೆಗೆ ಮತ್ತೊಂದು ಗೌರವದ ಗರಿ!ರಾಜ್ಯಮಟ್ಟದಲ್ಲಿ 7ನೇ ಸ್ಥಾನ, ಪೊಲೀಸರಿಗೆ ದಲಿತ ಸಂಘಟನೆಗಳ ಸಮನ್ವಯ ವೇದಿಕೆಯಿಂದ ಗೌರವಾಭಿನಂದನೆ.!

ಕುಂದಾಪುರ:
ಒಂದು ಕಾಲದಲ್ಲಿ ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದ್ದ ಗಂಗೊಳ್ಳಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ  ಇಲ್ಲಿಯ ತನಕ ನಿರಂತರವಾಗಿ ಶ್ರಮಿಸಿದ ಪೊಲೀಸ್ ಇಲಾಖೆಗೆ ಇದೀಗ ಮತ್ತೊಂದು ಗೌರವ ಲಭಿಸಿದೆ. ರಾಜ್ಯಮಟ್ಟದ ಪೊಲೀಸ್ ಠಾಣೆಗಳ ಕಾರ್ಯಕ್ಷಮತೆ ಮತ್ತು ಸಾಧನೆಯ ಮೌಲ್ಯಮಾಪನದಲ್ಲಿ ಕರ್ನಾಟಕದ ಟಾಪ್‌ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದು ಉಡುಪಿ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ದಲಿತ ಸಂಘಟನೆಗಳ ಸಮನ್ವಯ ವೇದಿಕೆ, ಕುಂದಾಪುರ ಮತ್ತು ಬೈಂದೂರು ತಾಲೂಕುಗಳ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
2014 ರಿಂದ 2022 ರ ಅವಧಿಯಲ್ಲಿ ಗಂಗೊಳ್ಳಿ ತೀವ್ರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು, ಆಗಾಗ್ಗೆ ಕೋಮು ಗಲಾಟೆಗಳು ನಡೆಯುತ್ತಿದ್ದವು ಎಂದು ಸಂಘಟನೆಯು ಉಲ್ಲೇಖಿಸಿದೆ.  ಹಾಗೂ  ಕಳೆದ ನಾಲ್ಕು ವರ್ಷಗಳಿಂದ  ಯಾವುದೇ ಕೋಮು ಗಲಭೆಗಳು ಪ್ರಕರಣಗಳು  ಸಂಪೂರ್ಣ  ಹತೋಟಿಗೆಬಂದಿದೆ, ಇಂತಹ ಸವಾಲಿನ ಪರಿಸ್ಥಿತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ್ದಾರೆ. ವಿಶೇಷವಾಗಿ 2016ರಿಂದ 2026ರವರೆಗಿನ ಅವಧಿಯಲ್ಲಿ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಪರಿಶ್ರಮ, ಶಿಸ್ತು ಮತ್ತು ಕರ್ತವ್ಯನಿಷ್ಠೆ ಈ ಸಾಧನೆಗೆ ಪ್ರಮುಖ ಕಾರಣವೆಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದರೆ ಕೇವಲ ಕಾನೂನು ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳುವುದಷ್ಟೇ ಅಲ್ಲ; ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವುದೂ ಆಗಿದೆ. ಈ ನಿಟ್ಟಿನಲ್ಲಿ ಜನರ ವಿಶ್ವಾಸ ಗಳಿಸಿ, ವೃತ್ತಿಪರ ಕಾರ್ಯಕ್ಷಮತೆಯ ಮೂಲಕ ರಾಜ್ಯಮಟ್ಟದಲ್ಲಿ ಗಮನ ಸೆಳೆದಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಸಾಧನೆ ಪ್ರಶಂಸನೀಯವಾಗಿದೆ.
ಈ ಸಾಧನೆಯನ್ನು ಗುರುತಿಸಿದ ದಲಿತ ಸಂಘಟನೆಗಳ ಸಮನ್ವಯ ವೇದಿಕೆಯು, ಕುಂದಾಪುರ ಮತ್ತು ಬೈಂದೂರು ತಾಲೂಕುಗಳ ವತಿಯಿಂದ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಗೌರವಿಸಿ ಅಭಿನಂದನೆ ಸಲ್ಲಿಸಿತು. ಸಾರ್ವಜನಿಕ ಸೇವೆಯಲ್ಲಿ ನಿಷ್ಠೆ ಮತ್ತು ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸುವವರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನೂ ಈ ಸನ್ಮಾನ ಸಾರಿತು.
ಮುಂದಿನ ದಿನಗಳಲ್ಲಿಯೂ ಗಂಗೊಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಮೂಲಕ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಸಂಘಟನೆಯ ಪದಾಧಿಕಾರಿಗಳು ಹಾರೈಸಿದರು.
ರಾಜ್ಯಮಟ್ಟದಲ್ಲಿ 7ನೇ ಸ್ಥಾನ… ಉಡುಪಿ ಜಿಲ್ಲೆಗೆ ಹೆಮ್ಮೆ… ಕರ್ತವ್ಯನಿಷ್ಠ ಪೊಲೀಸ್ ಸಿಬ್ಬಂದಿಗೆ ಸಾರ್ವಜನಿಕ ಸಂಘಟನೆಯ ಗೌರವ!
ಗಂಗೊಳ್ಳಿ ಪೊಲೀಸ್ ಠಾಣೆಯ ಈ ಸಾಧನೆ ಪೊಲೀಸ್ ಇಲಾಖೆಯ ಪರಿಶ್ರಮಕ್ಕೆ ಸಂದ ಗೌರವವಾಗಿದ್ದು, ಠಾಣೆಯ ಸಮಸ್ತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ COSTALNEWS ವತಿಯಿಂದಲೂ ಹೃತ್ಪೂರ್ವಕ ಅಭಿನಂದನೆಗಳು.
COSTALNEWS – ನಿಮ್ಮ ಸುದ್ದಿ, ನಿಮ್ಮ ಧ್ವನಿ.

Ads on article

Advertise in articles 1

advertising articles 2

Advertise under the article