ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS /ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬ್ರಹ್ಮವರ ತಾಲೂಕು ಅಧ್ಯಕ್ಷರ ಮೇಲಿನ ದರೋಡೆ ಯತ್ನ: ತಕ್ಷಣ ಸ್ಪಂದಿಸಿ ರಕ್ಷಣೆ ನೀಡಿದ ಕೋಟ ಪೊಲೀಸರಿಗೆ ಅಭಿನಂದನೆ!

COSTALNEWS /ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬ್ರಹ್ಮವರ ತಾಲೂಕು ಅಧ್ಯಕ್ಷರ ಮೇಲಿನ ದರೋಡೆ ಯತ್ನ: ತಕ್ಷಣ ಸ್ಪಂದಿಸಿ ರಕ್ಷಣೆ ನೀಡಿದ ಕೋಟ ಪೊಲೀಸರಿಗೆ ಅಭಿನಂದನೆ!

ಬ್ರಹ್ಮವರ / ಕೋಟ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬ್ರಹ್ಮವರ ತಾಲೂಕು ಅಧ್ಯಕ್ಷರು ತಮ್ಮ ಪತ್ರಿಕಾ ಕೆಲಸವನ್ನು ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ವೇಳೆ, ಪುಂಡ ರಿಕ್ಷಾ ಚಾಲಕನೋರ್ವ ದಾರಿ ಅಡ್ಡಗಟ್ಟಿ ಹಲ್ಲೆ ನಡೆಸಿ, ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಹಾಗೂ ಮೊಬೈಲ್ ದರೋಡೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೋಟ ಪೊಲೀಸರು:
ದರೋಡೆ ಯತ್ನದ ಆತಂಕಕಾರಿ ಸನ್ನಿವೇಶದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷರು ತಕ್ಷಣವೇ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು (PSI) ಆದ ಪ್ರವೀಣ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ಪ್ರವೀಣ್ ಹಾಗೂ ಠಾಣೆಯ ಸಿಬ್ಬಂದಿಗಳು ಅಧ್ಯಕ್ಷರಿಗೆ ಸೂಕ್ತ ರಕ್ಷಣೆ ನೀಡಿ, ಯಾವುದೇ ಅನಾಹುತ ಸಂಭವಿಸದಂತೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಪತ್ರಕರ್ತರ ಸಂಘಟನೆಯಿಂದ ಕೃತಜ್ಞತೆ ಹಾಗೂ ಅಭಿನಂದನೆ:
ಕಷ್ಟದ ಸಮಯದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರಕ್ಷಣೆ ನೀಡಿದ ಕೋಟ ಠಾಣಾಧಿಕಾರಿ ಪ್ರವೀಣ್ ಹಾಗೂ ಠಾಣೆಯ ಸಮಸ್ತ ಸಿಬ್ಬಂದಿ ವರ್ಗದವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಅಲ್ಲದೆ, ಇಂತಹ ದಕ್ಷ ಮತ್ತು ಜವಾಬ್ದಾರಿಯುತ ಅಧಿಕಾರಿಗಳನ್ನು ಜಿಲ್ಲೆಗೆ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೂ ಹಾಗೂ ಇಂತಹ ದಕ್ಷ ಅಧಿಕಾರಿಗಳನ್ನು ನೇಮಕಗೊಳಿಸಿ ಸಾರ್ವಜನಿಕರ ರಕ್ಷಣೆಗೆ ನಿಂತ ಗೃಹ ಇಲಾಖೆ ಹಾಗೂ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೂ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article